ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಎಸ್.ಆರ್.ಬಿ.ಆರ್ ಲೇಔಟ್‌ನಲ್ಲಿ ಸಾಕು ನಾಯಿಗಳ ಹಾವಳಿ ಹೆಚ್ಚುತ್ತಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 16ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ನಡೆದ ಘಟನೆಯಲ್ಲಿ, ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಸಾಕು ನಾಯಿ ಏಕಾಏಕಿ ದಾಳಿ ನಡೆಸಿದೆ.
ಈ ದಾಳಿಯಿಂದ ವೃದ್ಧರ ಕಾಲಿನ ಚರ್ಮ ಕಿತ್ತುಹೋಗುವಷ್ಟು ಗಂಭೀರ ಗಾಯವಾಗಿದೆ ತೀವ್ರ ರಕ್ತಸ್ರಾವದಿಂದ ಅವರು ನೋವಿನಿಂದ ಕಿರುಚಿದ ಹೃದಯವಿದ್ರಾವಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಘಟನೆಯ ವೇಳೆ ನಾಯಿಯ ಮಾಲೀಕ ಸ್ಥಳದಲ್ಲೇ ಇದ್ದರೂ ಅದನ್ನು ನಿಯಂತ್ರಿಸಲು ವಿಫಲರಾಗಿದ್ದಾರೆ ಎಂಬುದು ತಿಳಿದುಬಂದಿದೆ. ಕಳೆದ ಒಂದು ವಾರದಲ್ಲಿ ಇದೇ ಪ್ರದೇಶದಲ್ಲಿ ಇದು ಎರಡನೇ ದಾಳಿ ಆಗಿರುವುದು ಸ್ಥಳೀಯರಲ್ಲಿ ಭಯ ಹೆಚ್ಚಿಸಿದೆ.
ಈ ಹಿನ್ನೆಲೆ ಸ್ಥಳೀಯರು ಅಧಿಕಾರಿಗಳ ನಿರ್ಲಕ್ಷ್ಯವನ್ನು ಆರೋಪಿಸಿ, ಜಿಬಿಎ ವಿರುದ್ಧ ಕ್ರಮ ಕೈಗೊಳ್ಳದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕು ನಾಯಿಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಕುಡಿದ ಮತ್ತಲ್ಲಿ ಸ್ನೇಹಿತನನ್ನೇ ಕೊಂದ ಪಾಪಿ!


















