ದೇಶದ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ ಗೆ ಕೆಎ ಪೌಲ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಚಂದ್ರಬಾಬು ನಾಯ್ಡು ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ ಅವರಂತಹ ನಾಯಕರು ಕೂಡ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಟ್ಯಾಂಪರಿಂಗ್ ಕುರಿತು ಪ್ರಶ್ನೆ ಎತ್ತಿದ್ದರು ಎಂದು ಹೇಳಿದ್ದಾರೆ.
ಇದಕ್ಕೆ ಉತ್ತರಿಸಿದ ಸುಪ್ರೀಂ ಕೋರ್ಟ್ ನಿಮಗೆ ಚುನಾವಣೆಯಲ್ಲಿ ಗೆದ್ದರೆ, ಇವಿಎಂ ಅಥವಾ ಮತ ಯಂತ್ರಗಳನ್ನು ಟ್ಯಾಂಪರಿಂಗ್ ಮಾಡುವುದಿಲ್ಲ. ಚಂದ್ರಬಾಬು ನಾಯ್ಡು ಅಥವಾ ಶ್ರೀ ರೆಡ್ಡಿ ಸೋತಾಗ ಇವಿಎಂ ಟ್ಯಾಂಪರಿಂಗ್ ಆಗಿದೆ ಎಂದು ಹೇಳುತ್ತೀರಾ? ಎಂದು ಪ್ರಶ್ನಿಸಿತು. ಈ ಅರ್ಜಿ ತಿರಸ್ಕರಿಸುತ್ತೇವೆ ಎಂದು ಕೋರ್ಟ್ ಹೇಳಿ, ಅರ್ಜಿ ತಿರಸ್ಕೃತಗೊಳಿಸಿತು.
ತೀರ್ಪಿಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಭಾರತ್ ಜೋಡೋ ಯಾತ್ರೆಲ್ಲಿ ನಮಗೆ ಇವಿಎಂ ಬೇಡ, ಬ್ಯಾಲೆಟ್ ಪೇಪರ್ ಬೇಕು. ಇದಕ್ಕಾಗಿ ‘ಭಾರತ್ ಜೋಡೋ ಯಾತ್ರೆ’ ಮೂಲಕ ಅಭಿಯಾನ ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.