ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರನ ಪರವಾಗಿ ಹೈಕೋರ್ಟ್ ಗೆ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.
ಹೊಸ ವಕೀಲರ ನೇಮಕಕ್ಕೆ ಕನಿಷ್ಟ 7 ದಿನ ಕಾಲಾವಕಾಶಕ್ಕೆ ಭವಾನಿ ರೇವಣ್ಣ ಮನವಿ ಮಾಡಿದ್ದಾರೆ. ಎರಡು ಸಾವಿರಕ್ಕೂ ಹೆಚ್ಚಿನ ದಾಖಲೆಗಳನ್ನು ವಕೀಲರು ಪರಿಶೀಲಿಸಬೇಕು. ಆದರೆ ಸೂಕ್ತ ವಕೀಲರು ಸಿಗುತ್ತಿಲ್ಲವಾದ್ದರಿಂದ ಸ್ವಲ್ಪ ಸಮಯ ಬೇಕು. ಭವಾನಿ ರೇವಣ್ಣ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ವಾದ ಮಂಡಿಸಿದ್ದಾರೆ.
ಭವಾನಿ ಪರ ವಕೀಲರ ವಾದಕ್ಕೆ ಎಸ್ ಪಿಪಿ ಪ್ರೊ. ರವಿವರ್ಮ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭವಾನಿ ರೇವಣ್ಣ ಸ್ವತಃ ಆರೋಪಿ. ಈ ಕೇಸ್ ಗೆ 3ನೇ ವ್ಯಕ್ತಿ. ಇಂದು ಸಾಕ್ಷಿಯ ಹೇಳಿಕೆ ದಾಖಲಾಗಬಾರದೆಂದು ಡ್ರಾಮಾ ಮಾಡುತ್ತಿದ್ದಾರೆ. ಈ ರೀತಿಯ ಅರ್ಜಿಗಳನ್ನು ಸಲ್ಲಿಸಿ ಕೋರ್ಟ್ ಗೆ ವಂಚಿಸುತ್ತಿದ್ದಾರೆ. ಹೀಗಾಗಿ ಭವಾನಿ ರೇವಣ್ಣ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸಬೇಕೆಂದು ಮನವಿ ಮಾಡಿದ್ದಾರೆ.