ಬೆಂಗಳೂರು : ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3.21 ರೂಪಾಯಿ ಹೆಚ್ಚಳವಾಗಿದ್ದು, ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ.
ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಇದು “ಮಿಸ್ಟರ್ ನರೇಂದ್ರ ಮೋದಿ ಅವರ ಕೊಡುಗೆ” ಎಂದು ಲೇವಡಿ ಮಾಡಿದ್ದಾರೆ.
ಇಂಧನ ಬೆಲೆ ಏರಿಕೆಗೆ ಪ್ರಧಾನಿಯವರ ವಿಫಲ ವಿದೇಶಾಂಗ ನೀತಿಯೇ ಕಾರಣ ಎಂದು ಆರೋಪಿಸಿದ ಅವರು, ಬೇರೆ ದೇಶಗಳ ಜೊತೆ ಸರಿಯಾದ ಸಂಬಂಧ ಇಟ್ಟುಕೊಳ್ಳುವಲ್ಲಿ ಪ್ರಧಾನಿ ವಿಫಲವಾಗಿದ್ದಾರೆ. ಜನರು ತಮ್ಮ ದುಡಿಮೆಯಲ್ಲಿ ಬದುಕುತ್ತಿದ್ದಾರೆ, ಆದರೆ ಬೆಲೆ ಕಡಿಮೆ ಮಾಡಲು ಇವರಿಂದ ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.
ಚಿನ್ನ ಖರೀದಿಸಬೇಡಿ, ಎಣ್ಣೆ ಬಳಸಬೇಡಿ ಎಂದು ಪ್ರಧಾನಿ ಹೇಳುತ್ತಾರೆ. ಮಾಂಗಲ್ಯ ಸರ ಎಲ್ಲರಿಗೂ ಅಗತ್ಯ, ಅದನ್ನು ತೆಗೆದುಕೊಳ್ಳಬೇಡಿ ಎನ್ನಲು ಹೇಗೆ ಸಾಧ್ಯ? ಇದೆಲ್ಲವೂ ಅವಾಸ್ತವಿಕ ಮಾತುಗಳು ಎಂದು ಡಿಕೆಶಿ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಯಶವಂತಪುರ ರೈಲು ನಿಲ್ದಾಣದಲ್ಲಿ 13.41 ಕೆಜಿ ಗಾಂಜಾ ಪತ್ತೆ!


















