PGCIL Recruitment 2025: Apply for 1543 vacancies of field supervisor and engineer
ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 1,543 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಫೀಲ್ಡ್ ಎಂಜಿನಿಯರ್ ಮತ್ತು ಸೂಪರ್ವೈಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಗಳು: 1,543
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 27
ಉದ್ಯೋಗದ ಸ್ಥಳ: ದೇಶಾದ್ಯಂತ
ಫೀಲ್ಡ್ ಎಂಜಿನಿಯರ್ (ಎಲೆಕ್ಟ್ರಿಕಲ್), ಫೀಲ್ಡ್ ಎಂಜಿನಿಯರ್ (ಸಿವಿಲ್), ಫೀಲ್ಡ್ ಸೂಪರ್ ವೈಸರ್ (ಎಲೆಕ್ಟ್ರಿಕಲ್), ಫೀಲ್ಡ್ ಸೂಪರ್ ವೈಸರ್ (ಸಿವಿಲ್), ಫೀಳ್ಡ್ ಸೂಪರ್ ವೈಸರ್ (ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬಿಎಸ್ಸಿ, ಬಿಇ, ಬಿಟೆಕ್, ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಯ ಗರಿಷ್ಠ ವಯಸ್ಸು 29ರೊಳಗೆ ಇರಬೇಕು ಎಂದು ತಿಳಿಸಿದೆ. ಒಬಿಸಿ ಸಮುದಾಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು powergrid.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.



















