ಬೆಂಗಳೂರು : ಕೇಂದ್ರ ಸರ್ಕಾರದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹಾಗಾದರೆ, ಅರ್ಜಿ ಸಲ್ಲಿಸುವುದು ಹೇಗೆ? ಸಂಬಳ ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
ಹುದ್ದೆಗಳು: 33
ಹುದ್ದೆ ಹೆಸರು: ಟ್ರೈನಿ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 27
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ, ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ.ನಿಂದ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. 2026ರ ಗೇಟ್ ಪರೀಕ್ಷೆಯ ಅಂಕಗಳು, ಗ್ರೂಪ್ ಡಿಸ್ಕಷನ್ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ powergridindia.comಗೆ ಭೇಟಿ ನೀಡಬೇಕು
ಟ್ರೈನಿ ಎಂಜಿನಿಯರ್ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು.


















