ಮೈಸೂರು: ದಸಾರ ಉದ್ಘಾಟನೆ ವಿರೋಧಿಸಿ ಬಾನು ಮುಷ್ತಾಕ್ ವಿರುದ್ಧ ಪ್ರತಾಪ್ ಸಿಂಹ ಹಾಕಿದ್ದ ಪಿಐಎಲ್ ರದ್ದು ವಿಚಾರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.

ಸಾಹಿತಿ ಬಾನು ಮುಷ್ತಾಕ್ ಅವರ ಈ ಭಾಷಣವನ್ನು ಕೋರ್ಟ್‌ನ ಮುಂದಿಟ್ಟಿದ್ದೆವು ಇದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಅವಕಾಶವಿದೆ ಎನ್ನುವುದಾದರೆ, ಇದು ಹಿಂದೂ ದೇವತೆ ಮತ್ತು ಹಿಂದೂ ಸಂಸ್ಕೃತಿಯ ಅಂಗವಾಗಿರುವ ಅರಿಶಿಣ ಕುಂಕುಮದ ಮೇಲಿನ ದ್ವೇಷವಲ್ಲ ಎನ್ನುವುದಾದರೆ ನಮ್ಮ ನಾಯಕರ ವಿರುದ್ಧ ಸಿದ್ದರಾಮಯ್ಯ ಸರ್ಕಾರ ಹಾಕಿರುವ ಬಹಳಷ್ಟು FIRಗಳನ್ನು ಕೂಡಲೇ ರದ್ದಾಗಬೇಕಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.



















