ವಾಷಿಂಗ್ಟನ್ : ಅಮೆರಿಕದಲ್ಲಿ ವಿಮಾನ ದುರಂತವಂದು ಸಂಭವಿಸಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (DEN) ದಿಂದ ಮಿಯಾಮಿ (MIA) ಗೆ ಹಾರಲು ನಿಗದಿಯಾಗಿದ್ದ ಅಮೇರಿಕನ್ ಏರ್ಲೈನ್ಸ್ ವಿಮಾನವು ಟೇಕ್ ಆಫ್ ಆಗುವ ಮೊದಲೇ ವಿಮಾನದ ಟೈರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಅಧಿಕೃತವಾಗಿ ಹೇಳಿದೆ.
ಕೂಡಲೇ ಸಿಬ್ಬಂದಿಗಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕಳಗೆ ಇಳಿಸಿದ್ದಾರೆ. ನಮ್ಮ ನಿರ್ವಹಣಾ ತಂಡವು ವಿಮಾನವನ್ನು ಪರಿಶೀಲನೆ ನಡೆಸುತ್ತಿದೆ ಎಂದು ವಿಮಾನಯಾನ ಸಂಸ್ಥೆಯು ಹೇಳಿಕೆಯಲ್ಲಿ ತಿಳಿಸಿದೆ.
ಈ ವಿಮಾನದಲ್ಲಿ ಒಟ್ಟು 173 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ವಿಮಾನದಲ್ಲಿದ್ದರು. ವಿಮಾನಯಾನ ಸಂಸ್ಥೆಯ ಪ್ರಕಾರ, ಪ್ರಯಾಣಿಕರನ್ನು ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ತಿಳಿದು ಬಂದಿದೆ.