ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಕೋರ್ಟ್ ನಲ್ಲಿ ಮೊದಲ ಸೋಲಾಗಿದೆ. ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ತೀರ್ಪು ನೀಡಿದೆ.
ಈ ಮೂಲಕ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧ ಎಫ್ ಐಆರ್ ದಾಖಲಿಸಬೇಕೆಂದು ದೂರುದಾರಲ್ಲಿ ಒಬ್ಬರಾದ ಪ್ರದೀಪ್ ಕುಮಾರ್ ಅವರು ಲೋಯಾಕುತ್ ಎಸ್ಪಿ ಟಿ.ಜೆ. ಉದೇಸ್ ಅವರಿಗೆ ಮನವಿ ಮಾಡಿದ್ದಾರೆ.
ಪ್ರದೀಪ್ ಕುಮಾರ್ ಅವರು ಜೆಡಿಎಸ್ ಮುಖಂಡರೊಂದಿಗೆ ನಗರದ ಲೋಕಾಯುಕ್ತ ಕಚೇರಿಗೆ ಬಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದ ತೀರ್ಪಿನ ಪ್ರತಿಯೊಂದಿಗೆ ದೂರು ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರದೀಪ್ ಕುಮಾರ್, ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಕ್ರಮದಲ್ಲಿ ಭಾಗಿಯಾದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸುವಂತೆ ಮನವಿ ಮಾಡಿದ್ದೇವೆ. ಹೈಕೋರ್ಟ್, ಜುಲೈ 31ರಂದು ಹಾಗೂ ಆ.19ರಂದು ಸಲ್ಲಿಸಿರುವ ದೂರುಗಳನ್ನು ಆಧರಿಸಿ ಎಫ್‌ಐಆರ್ ದಾಖಲಿಸಲು ಅವಕಾಶವಿದೆ. ನ್ಯಾಯಾಲಯವೇ ಹೇಳಿರುವಂತೆ ಪೂರ್ವ ಅನುಮತಿಯೇನೂ ಬೇಕಾಗುವುದಿಲ್ಲ. ಹೀಗಾಗಿ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದೇವೆ ಎಂದು ಹೇಳಿದ್ದಾರೆ.
ಎಫ್‌ಐಆರ್ ದಾಖಲಿಸುವುದಕ್ಕೆ ಯಾವುದೇ ತಡೆಯಾಜ್ಞೆ ಕೂಡ ಇಲ್ಲ. ಆದರೆ, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಿದ್ದಾರೆ. ಹೀಗಾಗಿ ಹಿಂಬರಹ ನೀಡುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ನಾನು ಹಿಂದೆ ಸಲ್ಲಿಸಿದ್ದ ದೂರು ಆಧರಿಸಿ ಕೈಗೊಂಡ ಕ್ರಮದ ಬಗ್ಗೆ ಹಿಂಬರಹ ಕೊಡಬೇಕು’ ಎಂದು ಪ್ರದೀಪ್‌ಕುಮಾರ್ ಪಟ್ಟು ಹಿಡಿದರು. ‘ಆಗ ಈಗ ಕೊಡಲು ಬರುವುದಿಲ್ಲ ಎಂದು ಎಸ್ಪಿ ಹೇಳಿದ್ದಾರೆ. ಈ ವೇಳೆ ಜೆಡಿಎಸ್ ರಾಜ್ಯ ಘಟಕದ ವಕ್ತಾರ ರವಿಚಂದ್ರೇಗೌಡ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್ ಸೇರಿದಂತೆ ಹಲವರು ಇದ್ದರು.