ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪ್ರಧಾನಿ ಭೇಟಿ ಮಾಡಿ ಅಜಿತ್ ದೋವಾಲ್ ಚರ್ಚೆ ನಡೆಸಿದ್ದಾರೆ.
ನಿನ್ನೆಯಷ್ಟೇ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ನಡೆಸಲಾಗಿತ್ತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಉಗ್ರರ ನೆಲೆಗಳನ್ನು ಟಾರ್ಗೆಟ್ ಮಾಡಿ ಈ ಕಾರ್ಯಚರಣೆ ನಡೆಸಲಾಗಿತ್ತು. ಇದೀಗ ಪ್ರಧಾನಿ ಮೋದಿ ಭೇಟಿ ಮಾಡಿದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್, ಆಪರೇಷನ್ ನ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಆಪರೇಷನ್ ಸಿಂಧೂರ್ ನಲ್ಲಿ 70ಕ್ಕೂ ಹೆಚ್ಚು ಮಂದಿ ಉಗ್ರರು ಹತರಾಗಿದ್ದಾರೆ. ಜೈಶ್ ಸಂಘಟನೆ ಸಂಸ್ಥಾಪಕ ಮಸೂದ್ ಅಜರ್ ಕುಟುಂಬದ 10 ಮಂದಿ ಹಾಗೂ 4 ಸಹಚರರು ಸೇರಿ 14 ಮಂದಿ ಪ್ರಾಣ ತೆತ್ತಿದ್ದಾರೆ. ಇದರ ನಡುವೆ, ಪಾಕ್ ಪ್ರಧಾನಿ ಹೇಳಿಕೆ ರಿಲೀಸ್ ಆಗಿದೆ. ಹೀಗಾಗಿ ಗಡಿಯಲ್ಲಿ ಕೈಗೊಂಡಿರುವ ಭದ್ರತಾ ವ್ಯವಸ್ಥೆಗಳ ಬಗ್ಗೆಯೂ ದೋವಾಲ್ ಪ್ರಧಾನಿಗೆ ವಿವರಣೆ ನೀಡಿದ್ದಾರೆ.