ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಮನೆ ಇಲ್ಲದವರಿಗೆ ಹಣಕಾಸು ನೆರವು ನೀಡಲು ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಲಾಗಿದೆ. ಯೋಜನೆಯ ಅನುಕೂಲ ಪಡೆಯುವವರು ಅರ್ಜಿ ಸಲ್ಲಿಸುವ ಗಡುವನ್ನು ಕೇಂದ್ರ ಸರ್ಕಾರವೀಗ 2025ರ ಡಿಸೆಂಬರ್ 30ರವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ, ಮನೆ ಇಲ್ಲದವರು ಹಣಕಾಸು ನೆರವು ಪಡೆಯಲು ಯೋಜನೆ ಅನ್ವಯ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಸಲ್ಲಿಸೋದು ಹೇಗೆ? ಯಾವ ದಾಖಲೆಗಳು ಬೇಕು ಎಂಬುದರ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಇರುವ ನಿಯಮಗಳು
- ಅರ್ಜಿ ಸಲ್ಲಿಸುವವರು ಭಾರತೀಯ ಪ್ರಜೆಯಾಗಿರಬೇಕು.
- ಅರ್ಜಿದಾರರು ಈಗಾಗಲೇ ಶಾಶ್ವತ ಮನೆ ಹೊಂದಿರಬಾರದು.
- ಇಡಬ್ಲ್ಯೂಎಸ್ ವರ್ಗದವರ ವಾರ್ಷಿಕ ಆದಾಯ 3 ಲಕ್ಷ ರೂ. ಮೀರಬಾರದು. ಇತರೆ ವರ್ಗದವರ ಆದಾಯ 3-6 ಲಕ್ಷ ರೂ. ಹಾಗೂ ಮಧ್ಯಮ ವರ್ಗದವರ ಆದಾಯ 6-9 ಲಕ್ಷ ರೂ. ಮೀರಬಾರದು.
- ಅರ್ಜಿದಾರರು ಬ್ಯಾಂಕ್ ಖಾತೆ ಹೊಂದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
- ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- “ಹೊಸ ನೋಂದಣಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ಅಗತ್ಯ ಮಾಹಿತಿಯನ್ನು ನಮೂದಿಸಿ.
- ನೋಂದಣಿ ಪೂರ್ಣಗೊಂಡ ನಂತರ ನಿಮಗೆ ಲಾಗಿನ್ ವಿವರಗಳು ಸಿಗುತ್ತವೆ.
- ಪೋರ್ಟಲ್ ಗೆ ಲಾಗಿನ್ ಆಗಬೇಕು.
- ಅಗತ್ಯವಿರುವ ಮಾಹಿತಿಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಿ.
- ಬಳಿಕ Submit ಮಾಡಿ.
- ಅರ್ಜಿಯನ್ನು Submit ಮಾಡಿದ ನಂತರ, ರಶೀದಿ ಅಥವಾ ಅರ್ಜಿ ಸ್ಲಿಪ್ ಅನ್ನು ಡೌನ್ ಲೋಡ್ ಮಾಡಿಕೊಂಡಿರಿ.
ನೀಡಬೇಕಾದ ದಾಖಲೆಗಳು
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಆದಾಯ ಪ್ರಮಾಣಪತ್ರ
- ಬ್ಯಾಂಕ್ ಪಾಸ್ ಬುಕ್
- ವಿಳಾಸದ ದಾಖಲೆ
- ಪಾಸ್ಪೋರ್ಟ್ ಸೈಜ್ ಫೋಟೋ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್