ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ವಿಶ್ವಕಪ್ ಚಾಂಪಿಯನ್ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿಯಾಗುವ ಸಾಧ್ಯತೆಯಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವು ನ.5 ರಂದು ಬುಧವಾರ ಪ್ರಧಾನಿಯವರೊಂದಿಗಿನ ಸಭೆಗಾಗಿ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದೆ ಎಂದು ಮೂಲಗಳು ತಿಳಿಸಿವೆ.
ನವೆಂಬರ್ 2 ರ ಭಾನುವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ತಂಡ ಗೆಲ್ಲುತ್ತಿದ್ದಂತೆ ಮೋದಿ ಅವರು ಎಕ್ಸ್ ಖಾತೆಯಲ್ಲಿ ತಮ್ಮ ಸಂತಸವನ್ನು ವ್ಯಕ್ತಪಡಿಸಿ, ಈ ವಿಜಯವನ್ನು ಭಾರತದಲ್ಲಿ ಮಹಿಳಾ ಕ್ರೀಡೆಗಳಿಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಹೇಳಿದ್ದಾರೆ.
“ಫೈನಲ್ ಪಂದ್ಯದಲ್ಲಿ ಭಾರತೀಯ ತಂಡದ ಆಟವು ಅತ್ಯದ್ಭುತ ಕೌಶಲ ಹಾಗೂ ಆತ್ಮವಿಶ್ವಾಸಕ್ಕೆ ಹಿಡಿದ ಕನ್ನಡಿಯಾಗಿದೆ. ಒಂದು ತಂಡವಾಗಿ ತೋರಿದ ಸಾಹಸ ಮತ್ತು ವರ್ಲ್ಡ್‌ಕಪ್ ಉದ್ದಕ್ಕೂ ತೋರಿದ ದೃಢತೆಗೆ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು, ಭವಿಷ್ಯದಲ್ಲಿ ಕ್ರೀಡೆಯನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಇನ್ನಷ್ಟು ಸ್ಫೂರ್ತಿಯನ್ನು ತರಲಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿ
ವಿಶ್ವಕಪ್ ಗೆದ್ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನವನ್ನು ಘೋಷಿಸಿದೆ. ಭಾರತೀಯ ತಂಡ, ಸಹಾಯಕ ಸಿಬ್ಬಂದಿ ಮತ್ತು ತರಬೇತುದಾರರಿಗೆ 51 ಕೋಟಿ ರೂ. ನಗದು ಬಹುಮಾನವನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಘೋಷಿಸಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೋ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ | ಡಿ.ಕೆ ಶಿವಕುಮಾರ್ ಘೋಷಣೆ



















