ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ ಟಿ ಹೊಸ ದರ ನಿರ್ಧಾರ ಮಾಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ವೇಳೆ ಹಣಕಾಸು ಸಚಿವಾಲಯದ ನಿರ್ಧಾರವನ್ನು ಕೊಂಡಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ದೀಪಾವಳಿಗೆ ಜಿಎಸ್ ಟಿ ಗಿಫ್ಟ್ ನೀಡುವುದಾಗಿ ಹೇಳಿದ್ದೆ.
ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸುವುದು ಮತ್ತು ದೇಶದ ಆರ್ಥಿಕತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ. ರೈತರು, ಸಣ್ಣ ಮತ್ತು ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು ಈ ಸುಧಾರಣೆಗಳಿಂದ ಪ್ರಯೋಜನ ಪಡೆಯುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.
ಸಣ್ಣ ವ್ಯಾಪಾರಿಗಳು ಮತ್ತು ಉದ್ಯಮಿಗಳು ವ್ಯಾಪಾರ ಮಾಡುವುದು ಸುಲಭವಾಗುತ್ತದೆ ಮತ್ತು ದೇಶದ ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಶೇ.5 ಮತ್ತು ಶೇ.18. ಅಂದರೆ ಶೇ.12 ಹಾಗೂ ಶೇ.28 ಸ್ಲ್ಯಾಬ್ಗಳು ರದ್ದಾಗಿವೆ. ಇದರಿಂದಾಗಿ ದಿನನಿತ್ಯದ ವಸ್ತುಗಳು ಅಗ್ಗವಾಗುತ್ತವೆ ಮತ್ತು ಜೀವ ಉಳಿಸುವ ಔಷಧಿಗಳಿಗೆ ತೆರಿಗೆಯಿಂದ ಸಂಪೂರ್ಣವಾಗಿ ವಿನಾಯಿತಿ ಸಿಗಲಿದೆ.