ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ ಸಿಂಗಾಪುರ ಪ್ರವಾಸ ಕೈಗೊಂಡಿದ್ದು, ಅದ್ದೂರಿಯಾಗಿ ಸ್ವಾಗತ ಸಿಕ್ಕಿದೆ.
ಬರೋಬ್ಬರಿ 6 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ.
ಈಗಷ್ಟೇ ಎರಡು ದಿನಗಳ ಬ್ರೂನೆ ಪ್ರವಾಸ ಮುಗಿಸಿದ ಮೋದಿ, ಸಿಂಗಾಪುರಕ್ಕೆ ತೆರಳಿದ್ದಾರೆ
ಚಾಂಗಿ ವಿಮಾನ ನಿಲ್ದಾಣದಲ್ಲಿ ಮೋದಿ ಅವರಿಗೆ ಅಧಿಕೃತ ಸ್ವಾಗತ ಸಿಕ್ಕಿತು. ವಾಂಗ್ ಅವರನ್ನು ಭೇಟಿ ಮಾಡುವುದರ ಹೊರತಾಗಿ, ನರೇಂದ್ರ ಮೋದಿ ಅವರು ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ, ಹಿರಿಯ ಸಚಿವ ಲೀ ಸೀನ್ ಲೂಂಗ್, ಹಿರಿಯ ಸಚಿವ ಗೋ ಚೋಕ್ ಟಾಂಗ್ ರನ್ನು ಭೇಟಿ ಮಾಡಿದರು.
ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ-ಸಿಂಗಾಪುರದ ಸ್ನೇಹವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಸಭೆಗಳನ್ನು ಎದುರು ನೋಡುತ್ತಿದ್ದೇವೆ. ಭಾರತದ ಸುಧಾರಣೆಗಳು ಮತ್ತು ನಮ್ಮ ಯುವ ಶಕ್ತಿಯ ಪ್ರತಿಭೆಯು ನಮ್ಮ ರಾಷ್ಟ್ರವನ್ನು ಆದರ್ಶ ಹೂಡಿಕೆಯ ತಾಣವನ್ನಾಗಿ ಮಾಡುತ್ತದೆ. ನಾವು ನಿಕಟ ಸಾಂಸ್ಕೃತಿಕ ಸಂಬಂಧಗಳನ್ನು ಎದುರು ನೋಡುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.
ಸಿಂಗಾಪುರದಲ್ಲಿ ಅತೀ ಹೆಚ್ಚು ವಲಸಿಗರು ಭಾರತೀಯರಾಗಿದ್ದಾರೆ. ಸಿಂಗಾಪೂರದಲ್ಲಿ ಸುಮಾರು 3.5 ಲಕ್ಷ ಭಾರತೀಯರಿದ್ದಾರೆ. ಹಿಂದೆ 2015ರಲ್ಲಿ ಪ್ರಧಾನಿ ಮೋದಿ ಅವರು ಸಿಂಗಾಪುರಕ್ಕೆ ಭೇಟಿ ನೀಡಿದ್ದರು. ಈಗ ಮತ್ತೆ ಭೇಟಿ ನೀಡಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ.