ಸಿಂಗಾಪುರ: ಭಾರತದಲ್ಲಿ ಹೂಡಿಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಂಗಾಪುರದಲ್ಲಿ ಉದ್ಯಮಿಗಳಿಗೆ ಆಹ್ವಾನ ನೀಡಿದ್ದಾರೆ.
ಸಿಂಗಾಪುರದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಉದ್ಯಮ ನಾಯಕರಾದ ಬ್ಲಾಕ್ ಸ್ಟೋನ್ ಸಿಂಗಾಪುರ್, ಟೆಮಾಸೆಕ್ ಹೋಲ್ಡಿಂಗ್ಸ್, ಸೆಂಬ್ ಕಾರ್ಪ್ ಇಂಡಸ್ಟ್ರೀಸ್ ಲಿಮಿಟೆಡ್, ಕ್ಯಾಪಿಟಾಲ್ಯಾಂಡ್ ಇನ್ವೆಸ್ಟ್ ಮೆಂಟ್, ಎಸ್ ಟಿ ಟೆಲಿಮೀಡಿಯಾ ಗ್ಲೋಬಲ್ ಡಾಟಾ ಸೆಂಟರ್ ಗಳು ಮತ್ತು ಸಿಂಗಾಪುರ್ ಏರ್ ವೇಸ್ ಸಿಇಒಗಳಿಗೆ ಮನವಿ ಮಾಡಿದರು.
ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಸಿಂಗಾಪೂರದಲ್ಲಿ ಉನ್ನತ ವ್ಯಾಪಾರ ನಾಯಕರು ಮತ್ತು ಸಿಇಒಗಳೊಂದಿಗೆ ಸಂವಾದ ನಡೆಸಿದ್ದೇವೆ. ನಾನು ಭಾರತದಲ್ಲಿ ನಡೆಯುತ್ತಿರುವ ಸುಧಾರಣೆಗಳನ್ನು ಎತ್ತಿ ತೋರಿಸಿದೆ. ಇದು ಹೂಡಿಕೆ ಮತ್ತು ನಾವೀನ್ಯತೆಯನ್ನು ಉತ್ತೇಜಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
ಇದಕ್ಕೂ ಮುನ್ನ ಸಿಂಗಾಪುರದಲ್ಲಿ ಸಿಂಗಾಪುರ ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ ಅವರನ್ನು ಭೇಟಿ ಮಾಡಿ ಭಾರತ-ಸಿಂಗಾಪುರ ಸಹಕಾರ ವಿಸ್ತರಿಸುವ ಕುರಿತು ಮಾತನಾಡಿದರು.