ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 750 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪಂಜಾಬ್ ನ್ಯಾಷನಲ್ ಬ್ಯಾಂಕ್
ಒಟ್ಟು ಹುದ್ದೆಗಳು: 750
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 23
ಹುದ್ದೆಯ ಹೆಸರು: ಲೋಕಲ್ ಬ್ಯಾಂಕ್ ಆಫೀಸರ್
ಆಂಧ್ರಪ್ರದೇಶ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು, ಜಮ್ಮು-ಕಾಶ್ಮೀರ ಸೇರಿ ದೇಶದ ಹಲವೆಡೆ ಇರುವ ಬ್ಯಾಂಕಿನ ಬ್ರ್ಯಾಂಚ್ ಗಳಿಗೆ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲೂ 85 ಹುದ್ದೆಗಳು ಖಾಲಿ ಇವೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಕನಿಷ್ಠ 20ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 59 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದ ಅಭ್ಯರ್ಥಿಗಳಿಗೆ 1,180 ರೂಪಾಯಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗುತ್ತದೆ. ಆನ್ ಲೈನ್ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಭಾಷಾ ಪ್ರೌಢಿಮೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ 85 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು pnbindia.inಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ 3 ಹುದ್ದೆಗಳ ನೇಮಕ: 83 ಸಾವಿರ ರೂ. ಸ್ಯಾಲರಿ



















