ಯಾದಗಿರಿ : ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಲ್ಲಿಕಾರ್ಜುನ ಮುತ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೂಂದೂಡಿಕೆಯಾಗಿದೆ.
ನಿರೀಕ್ಷಣಾ ಜಾಮೀನು ಅರ್ಜಿಗೆ ಸರ್ಕಾರದ ಪರ ವಕೀಲರದಿಂದ ಆಕ್ಷೇಪಣೆ ಹಿನ್ನೆಲೆಯಲ್ಲಿ ಮಾರ್ಚ್ 6ಕ್ಕೆ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಮುಂದೂಡಿದೆ.
ಮತ್ತೊಂದೆಡೆ ಈ ಪ್ರಕರಣದಲ್ಲಿ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಕಲಬುರಗಿ ಪೀಠಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಮಲ್ಲಿಕಾರ್ಜುನ ಮುತ್ಯಾ ಪರ ವಕೀಲರು ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾದ ಬೆನ್ನಲ್ಲೇ ತಮ್ಮ ವಕೀಲರ ಮೂಲಕ ಪ್ರಕರಣ ರದ್ದುಕೋರಿ ಮುತ್ಯಾ ಕಲಬುರಗಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದೀಗ ಏಕಾಏಕಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ. ಇದರಿಂದ ಮುತ್ಯಾ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. .
ಇದನ್ನೂ ಓದಿ : ಇರಾನ್‌ನಲ್ಲಿ ಹೆಣಗಳ ರಾಶಿ.. ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ!



















