ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರೆದಿದ್ದು, ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಜಲಪಾತದಲ್ಲಿ ಹುಚ್ಚಾಟ ಮಾಡುತ್ತ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಮಳೆಯಿಂದ ಹತ್ತಾರು ಕೃತಕ ಜಲಪಾತಗಳು ಸೃಷ್ಠಿಯಾಗಿವೆ. ಆದ್ದರಿಂದ ಜಲಪಾತಗಳ ಬಳಿ ತೆರಳದಂತೆ ಸೂಚನೆ ನೀಡಲಾಗಿದೆ.
ಸೂಚನೆ ಪಾಲಿಸದೆ ಅಪಾಯಕಾರಿ ಸ್ಥಳದಲ್ಲಿ ಮೋಜು- ಮಸ್ತಿ ಮಾಡುತ್ತಿದ್ದವರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ಸ್ಥಳದಲ್ಲೇ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದಾರೆ.



















