ಬೆಂಗಳೂರು: ಪೊಲೀಸ್ ಇಲಾಖೆಯ (Karnataka Police Department) ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳು ಧರಿಸುವ ಟೋಪಿ, ಬ್ರಿಟಿಷ್ ಕಾಲದ್ದು ಎನ್ನವುದು ಬಹುತೇಕರಿಗೆ ಗೊತ್ತಿಲ್ಲ. ಈಗ ಈ ಬ್ರಿಟಿಷ್ ಟೋಪಿಗೆ (Hat) ಗುಡ್ ಬೈ ಹೇಳಲಾಗುತ್ತಿದೆ.
ಟೋಪಿ ಹಲವು ಸಂದರ್ಭಗಳಲ್ಲಿ ದೊಡ್ಡ ಸಮಸ್ಯೆ ಉಂಟು ಮಾಡುತ್ತಿದೆ. ತಲೆ ಮೇಲೆ ಸರಿಯಾಗಿ ನಿಲ್ಲುವುದಿಲ್ಲ. ಒಂದು ವೇಳೆ ಓಡುವಾಗ ಕೆಳಗೆ ಬಿದ್ದರೆ ಸಾರ್ವಜನಿಕವಾಗಿ ಅವಮಾನವಲ್ಲದೇ, ಇಲಾಖೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಹೀಗಾಗಿ ಈ ಟೋಪಿಗೆ ಗುಡ್ ಬೈ ಹೇಳಲು ಪೊಲೀಸ್ ಇಲಾಖೆ ಮುಂದಾಗಿದೆ.
ಪೊಲೀಸ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಗ್ಲೋಚ್ ಟೋಪಿಯಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರಲಿದೆ ಎದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಹೀಗಾಗಿ ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳಿಗೆ ಪೀಕ್ ಕ್ಯಾಪ್‌ಗಳನ್ನು ನೀಡಲಾಗಿದೆ. ಈ ವಿಷಯವಾಗಿ ಕರ್ನಾಟಕ ಪೊಲೀಸ್ ಇಲಾಖೆ ಕೂಡ ಚಿಂತನೆ ನಡೆಸಿದೆ.