ಬೆಂಗಳೂರು: ಆರ್ ಸಿಬಿ ಪಂದ್ಯದ ಸಂದರ್ಭದಲ್ಲಿ ಬ್ಲ್ಯಾಕ್ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರ್ ಸಿಬಿ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬ್ಲ್ಯಾಕ್ ಟಿಕೆಟ್ ಮಾರುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಮಫ್ತಿಯಲ್ಲಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿರುವ ವಿಡಿಯೋ ಕೂಡ ಈಗ ವೈರಲ್ ಆಗುತ್ತಿದೆ.
ಫ್ಯಾನ್ಸ್ ಸೋಗಿನಲ್ಲಿ ಬ್ಲ್ಯಾಕ್ ಟಿಕೆಟ್ ಮಾರುತ್ತಿದ್ದ 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ.