ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕ್ರೈಂ ರೇಟ್ ಹೆಚ್ಚಾಗುತ್ತಿರುವ ಹಿನ್ನೆಲೆ ರೌಡಿಗಳ ಮೇಲೆ ಪೊಲೀಸರು ನಿಗಾ ವಹಿಸಲು ಮುಂದಾಗಿದ್ದಾರೆ.
ಆಯಾ ಸಬ್ ಡಿವಿಷನ್ ಎಸಿಪಿಗಳ ನೇತೃತ್ವದಲ್ಲಿ ಹಲಸೂರು, ಬಾಣಸವಾಡಿ, ಇಂದಿರಾನಗರ, ಹೆಣ್ಣೂರು, ರಾಮಮೂರ್ತಿನಗರ, ಭಾರತಿನಗರ, ಶಿವಾಜಿನಗರ, ಸೇರಿದಂತೆ ಪೂರ್ವ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ನಗರದಲ್ಲಿ ಇತ್ತೀಚಿಗೆ ಸರಗಳ್ಳತನ ಹಾಗೂ ಪುಡಿ ರೌಡಿಗಳ ಹಾವಳಿ ಹೆಚ್ಚಾದ ಹಿನ್ನೆಲೆ ಪೊಲೀಸರು ಹಳೇ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ರೌಡಿಗಳ ಇತ್ತೀಚಿನ ಚಲನವಲನಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದು, ಕ್ರೈಂನಲ್ಲಿ ಭಾಗಿಯಾಗಿರುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕ್ರಮಕ್ಕೆ ಸಿದ್ಧತೆ ಕೂಡ ಮಾಡಿಕೊಂಡಿದ್ದಾರೆ. ದಾಳಿ ವೇಳೆ ವೆಪನ್ಸ್‌ಗಳು ಸಿಕ್ಕಲ್ಲಿ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸುತ್ತಿದ್ದಾರೆ.



















