ಬೆಂಗಳೂರು : ಮಂಗಳೂರು ಜಿಲ್ಲೆಯಲ್ಲಿ ಹಿಂದೂ ಹಬ್ಬ ಹರಿದಿನಗಳು ಮತ್ತು ಕಾರ್ಯಕ್ರಮ ನಡೆಯುವ ವೇಳೆಯಲ್ಲಿ, ಯಕ್ಷಗಾನದಂತಹ ಕಾರ್ಯಕ್ರಮಗಳ ಆಯೋಜನೆಯ ಸಂದರ್ಭದಲ್ಲಿ ನಿರಂತರವಾಗಿ ಪೊಲೀಸ್ ಇಲಾಖೆ ತೊಂದರೆ ನೀಡುತ್ತಲೇ ಇದೆ. ಧಾರ್ಮಿಕ ಕಾರ್ಯಕ್ರಮ ನಡೆಯುವ ವೇಳೆ ಸ್ಪೀಕರ್ ಬಳಸುವಂತಿಲ್ಲ ಎಂದು ನೋಟೀಸ್ ನೀಡುತ್ತಾರೆ. ಬೆಳಿಗ್ಗೆ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿದ್ದರೇ, ಅವನ್ನೂ ವಶಕ್ಕೆ ಪಡೆದುಕೊಳ್ಳುತ್ತಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ವರದಿಗಾರರೊಂದಿಗೆ ಮಾತನಾಡಿದ ಕಾಮತ್, ಹಿಂದೂಗಳು ಕಾರ್ಯಕ್ರಮ ಮಾಡುವ ಸಂದರ್ಭಗಳಲ್ಲಿ ಧ್ವನಿವರ್ಧಕಗಳನ್ನು ಬಳಿಸಿದರೆ, ಆಯೋಜಕರ ಮೇಲೆ ಪ್ರಕರಣ ದಾಖಲು ಮಾಡಿ ಅಡ್ಡಿ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಸೂಚನೆಗಳು, ನಿಯಮಗಳಿದ್ದವು. ಅವನ್ನು ಎಲ್ಲರೂ ಪಾಲಿಸುತ್ತಿದ್ದರು. ಆದರೆ ಧಾರ್ಮಿಕ ಕಾರ್ಯಕ್ರಮಗಳಿಗೆ ದಕ್ಕೆ ಬರುವಂತೆ ಎಂದೂ ಮಾಡಿಲ್ಲ. ಮುಸಲ್ಮಾನರು ಬೆಳಿಗ್ಗೆ, ಸಂಜೆ ನಮಾಜ್ ಮಾಡುತ್ತಾರೆ. ಅದನ್ನು ಕಾಂಗ್ರೆಸ್ ಸರ್ಕಾರ ಯಾಕೆ ಪ್ರಶ್ನೆ ಮಾಡುವುದಿಲ್ಲ. ಹಿಂದೂಗಳಿಗೊಂದು, ಮುಸಲ್ಮಾನರಿಗೊಂದು ನ್ಯಾಯ ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ.