ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮದ್ದೂರಿನಲ್ಲಿ ನಡೆದ ಘಟನೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಮೊದಲ ಘಟನೆಯಲ್ಲ. ಹಿಂದೆ ನಾಗಮಂಗಲ, ಕೆರೆಗೋಡಿನಲ್ಲಿ ಇಂತಹ ಘಟನೆಗಳು ನಡೆದಿವೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಾಂಗ್ರೆಸ್ ನ ಜನ ಪ್ರತಿನಿಧಿಗಳು ಧಕ್ಕೆಯುನ್ನುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಘಟನೆ ಬಗ್ಗೆ ಪೊಲೀಸ್ ಇಲಾಖೆ ವಿರುದ್ಧ ದೂರಲ್ಲ. ರಾಜ್ಯ ಪೊಲೀಸರು ಸ್ವತಂತ್ರ ಕಳೆದುಕೊಂಡಿದ್ದಾರೆ. ಮಸೀದಿ ಮುಂದೆ ಕಿಡಿಗಳ ವರ್ತನೆ ತೋರಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಹಾಗೂ ಗುಪ್ತಚರ ಇಲಾಖೆ ನೇರ ಹೊಣೆ. ಪೋಲಿಸರು ಈ ಸರ್ಕಾರದಲ್ಲಿ ಸ್ವತಂತ್ರ ಕಳೆದುಕೊಂಡಿದ್ದಾರೆ. ಇದು ಜನರ ಮೇಲೆ ಮುಂದಿನ ದಿನಗಳಲ್ಲಿ ಪರಿಣಾಮ ಬೀರಲಿದೆ ಎಂದಿದ್ದಾರೆ.
ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೆರೆಸಿಲ್ಲ. ಅನ್ಯ ಧರ್ಮಗಳಿಗೂ ಗೌರವ ಕೊಟ್ಟಿದ್ದೇವೆ. ಜಿಲ್ಲಾ ನಾಯಕರನ್ನು ಭೇಟಿ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.