ಬೆಂಗಳೂರು: ಠಾಣೆ ಚಿತ್ರದ ಹಾಡನ್ನು ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹಾಗೂ ಡಿ.ಎಸ್ ಮ್ಯಾಕ್ಸ್ ದಯಾನಂದ್ ಅನಾವರಣಗೊಳಿಸಿದರು.
ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,”ಠಾಣೆ” ಚಿತ್ರಕ್ಕಾಗಿ ಮಜಾಟಾಕೀಸ್ ಖ್ಯಾತಿಯ ರೆಮೊ ಬರೆದಿರುವ “ಬಾಳಿನಲ್ಲಿ ಭರವಸೆಯ ಬೆಳಕು” ಹಾಡನ್ನು ಬಿಡುಗಡೆ ಮಾಡಿದರು.
ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡನ್ನು ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಹಾಗೂ ಡಿ.ಎಸ್.ಮ್ಯಾಕ್ಸ್ ನ ದಯಾನಂದ್ ಅನಾವರಣಗೊಳಿಸಿದರು. ಅಲ್ಲದೇ, ಈ ವೇಳೆ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಠಾಣೆ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ತೆರೆಗೆ ಬರುವ ಹಂತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹ ಸಾಹಸ ಕಲಾವಿದನಾಗಿ ಗುರುತಿಸಿಕೊಂಡಿರುವ ಹಾಗೂ ರಂಗಭೂಮಿ ಕಲಾವಿದ ಪ್ರವೀಣ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಮೈಸೂರಿನ ಹರಿಣಾಕ್ಷಿ ಈ ಚಿತ್ರದ ನಾಯಕಿಯಾಗಿದ್ದಾರೆ. ಬಿ.ವಿ.ರಾಜರಾಂ, ಬಲ ರಾಜ್ವಾಡಿ, ರೋಹಿತ್ ನಾಗೇಶ್, ಕುಲದೀಪ್, ಸಂತೋಷ್ ಕರ್ಕಿ, ಭೀಷ್ಮ ರಾಮಯ್ಯ, ನಾಗರಾಜ್, ಬಲ ರಾಜ್ವಾಡಿ , ಪಿ.ಡಿ.ಸತೀಶ್ ಚಂದ್ರ, ಪ್ರವೀಣ್ ಜಾನ್, ಪೂಜಾ ರಾವ್ . ಕುಮಾರಿ ದೀಪಿಕಾ, ರೂಪ .ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಅಭಿನಯಿಸಿದ್ದಾರೆ.