ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಅವರ ಮಲತಂದೆಗೆ ವಿಚಾರಣೆಯ ಭಾಗ್ಯ ಸಿಕ್ಕಿದೆ.
ರನ್ಯಾ ಅಕ್ರಮ ಚಿನ್ನ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ರಾಮಚಂದ್ರ ಅವರನ್ನು ವಿಚಾರಣೆಗೊಳಪಡಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಸೂಚಿಸಿದೆ.
ರಾಮಚಂದ್ರರಾವ್ ಸದ್ಯ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ ವ್ಯವಸ್ಥಾಪಕರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಚಂದ್ರರಾವ್ ಅವರನ್ನು ತನೆಖೆ ನಡೆಸುವುದು ಅಗತ್ಯ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.
ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ನೆರವನ್ನು ನೀಡಲು ಡಿಜಿಐಜಿಪಿ ಅಲೋಕ್ ಮೋಹನ್ ಗೆ ಸೂಚನೆ ನೀಡಲಾಗಿದೆ. ಅಲ್ಲದೇ, ತನೆಖೆ ನಡೆಸಿ ಒಂದು ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ.