ಚಿತ್ರದುರ್ಗ: ಯುಗಾದಿ (Ugadi) ಹಿನ್ನೆಲೆಯಲ್ಲಿ ಜೂಜಾಟದಲ್ಲಿ(Gambling) ತೊಡಗಿದ್ದ ಬರೋಬ್ಬರಿ 575 ಜೂಜುಕೋರರನ್ನು ಬಂಧಿಸಿರುವ ಪೊಲೀಸರು 108 ಪ್ರಕರಣ ದಾಖಲಿಸಿದ್ದಾರೆ.
ಚಿತ್ರದುರ್ಗದ (Chitradurga) ವಿವಿಧೆಡೆ ಜೂಜಾಟದಲ್ಲಿ ತೊಡಗಿದ್ದ 575 ಜೂಜುಕೋರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, 108 ಜನ ಬಂಧಿತರಿಂದ 7.40 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಜೂಜಾಟದಲ್ಲಿ ತೊಡಗಿದ್ದರು ಎನ್ನಲಾಗಿದೆ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ.