ಕೊಪ್ಪಳ : ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಹೊರವಲಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ ವೇಳೆ ಜೂಜಾಟದಲ್ಲಿ ತೊಡಗಿದ್ದ ಹಲವರು ಸ್ಥಳದಿಂದ ಎದ್ನೋ-ಬಿದ್ನೋ ಅಂತ ಓಡಿ ಪರಾರಿಯಾಗಿದ್ದಾರೆ.
ಚಿಕ್ಕ ಜಂತಕಲ್ ಹೊರವಲಯದ ಶೆಡ್ ಒಂದರಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿತ್ತು. ಪ್ರಕರಣ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿರೇಶ್, ನರಸಪ್ಪ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ವೇಳೆ ಪೊಲೀಸರು 6,220 ನಗದನ್ನು ವಶಪಡಿಸಿಕೊಂಡಿದ್ದು, ಉಳಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಇದನ್ನೂ ಓದಿ : ‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!


















