ವಿಜಯನಗರ : ಜಿಲ್ಲೆಯ ಹೊಸಪೇಟೆಯಲ್ಲಿ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಡಿಬಿ ಡ್ಯಾಮ್ ರಸ್ತೆಯಲ್ಲಿರುವ ಹೆಸರಾಂತ ಬಾಲಾಜಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಒಡನಾಡಿ ಸೇವಾ ಸಂಸ್ಥೆಯಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಖಚಿತ ಮಾಹಿತಿ ಸಂಗ್ರಹಿಸಿದ ಪೊಲೀಸರು ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಡ್ಜ್‌ನ ಮೂವರು ಮಾಲೀಕರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವಿಜಯಪುರ, ಬೆಂಗಳೂರು ಹಾಗೂ ಹೊಸಪೇಟೆ ಮೂಲದ ಮಹಿಳೆಯರು ಈ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಕಳೆದ ಒಂದು ವರ್ಷದಿಂದ ಈ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಈ ಸಂಬಂಧ ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಾಲದ ಹಿಂದೆ ಇರುವ ಇತರರ ಬಗ್ಗೆ ಕೂಡ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಇದನ್ನೂ ಓದಿ : ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!



















