ಚಿಕ್ಕಮಗಳೂರು: ಅಕ್ರಮವಾಗಿ ದಾಸ್ತಾನು ಮಾಡಿರುವ 300 ಮೂಟೆ ಯೂರಿಯಾವನ್ನು ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸುಭಾಷ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರದ ನಿವಾಸಿ ವಿರ್ಲ್ಪೆರ್ಡ್ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಯೂರಿಯಾ ಗೊಬ್ಬರ ಅಧಿಕ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಿದ್ದರು.
ಬಾಳೆಹೊನ್ನೂರು ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿ ಸಮೇತ 300 ಮೂಟೆ ಯೂರಿಯಾ ಗೊಬ್ಬರವನ್ನ ವಶಕ್ಕೆ ಪಡೆದಿದ್ದಾರೆ.
ಹಾಸನ ಜಿಲ್ಲೆಯಿಂದ ಯೂರಿಯಾ ತಂದಿರುವುದಾಗಿ ವಿರ್ಲ್ಪೆರ್ಡ್ ಪೊಲೀಸರಿಗೆ ತಿಳಿಸಿದ್ದಾನೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















