ಬೆಂಗಳೂರು: ನಗರದಲ್ಲಿ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಜೆ.ಪಿ.ನಗರ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ಮರಳಿ ನೀಡದೆ, ದುರುಪಯೋಗ ಪಡಿಸಿಕೊಂಡಿರುವ ಆರೋಪ ಕೇಳಿ ಬಂದಿದೆ.
ಹೀಗಾಗಿ ಜೆಪಿ ನಗರ ಪೊಲೀಸ್ ಠಾಣೆಯ ಮಾಜಿ ಇನ್ ಸ್ಪೆಕ್ಟರ್ ವಿರುದ್ದ ಹಾಲಿ ಇನ್ ಸ್ಪೆಕ್ಟರ್ ರಾಧಾಕೃಷ್ಣ ಎಫ್ ಐಆರ್ ದಾಖಲಿಸಿದ್ದಾರೆ. ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ಮರಳಿ ನೀಡಿರಲಿಲ್ಲ. ಈ ಕುರಿತು ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನಾ ಪತ್ರ ನೀಡಿದರೂ ಉತ್ತರಿಸಿರಲಿಲ್ಲ. ಹೀಗಾಗಿ ಪ್ರಕರಣಗಳ ಮಾಲನ್ನು ಹಿಂತಿರುಗಿಸದೆ ದುರುಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.