ದೆಹಲಿ: ರಾಜಕೀಯ ಮಾಡಿದರೆ ಗಂಡಸ್ತನದ ರಾಜಕಾರಣ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ತಿಂಗಳಲ್ಲಿ ಸರ್ಕಾರ ಬೀಳಿಸಲು ಸಂಚು ಮಾಡಲಾಗುತ್ತಿದೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ. ಸುಮ್ಮನೆ ನನ್ನನ್ನು ಕೆಣಕಬೇಡಿ. ಆಂದೋಲನ ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ನವರಿಗೆ ನಾಚಿಕೆ ಆಕಬೇಕು. ವಿರೋಧ ಪಕ್ಷದಲ್ಲಿದ್ದಾಗ ಬೊಗಳೆ ಬಿಟ್ಟರು. ಸಾಕ್ಷಿಗಳಿಲ್ಲದೇ ಅವರು ಆರೋಪ ಮಾಡಿದರು. ವಿರೋಧ ಪಕ್ಷದ ಸ್ಥಾನಕ್ಕೆ ಅತ್ಯಂತ ನಿಷ್ಕ್ರಿಯವಾಗಿ ಸಿದ್ದರಾಮಯ್ಯ ಕೆಲಸ ಮಾಡಿದ್ದರು. ಕಡಿಮೆ ಸಂಖ್ಯೆ ಇದ್ದ ಜೆಡಿಎಸ್ ದಾಖಲೆ ಸಮೇತ ಹೋರಾಟ ಮಾಡಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕುತಂತ್ರ ಮಾಡುತ್ತಿರುವವರು ಯಾರು. ಹೆಚ್.ಡಿ.ರೇವಣ್ಣ ಮತ್ತು ಮಕ್ಕಳ ವಿರುದ್ಧ ಷಡ್ಯಂತ್ರ ಮಾಡಿದ್ದು ಯಾರು? ಅವರನ್ನು ಜೈಲಿಗೆ ಕಳುಹಿಸಿದವರು ಯಾರು? ನಮ್ಮ ಕುಟುಂಬದ ವಿರುದ್ಧ ಮಾತನಾಡಿದರೆ ಸುಮ್ಮನೆ ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.