ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳ ನಡೆಯುತ್ತಿದೆ. ಕೋಟ್ಯಂತರ ಜನರು ತ್ರಿವೇಣಿ ಸಂಗಮಕ್ಕೆ ತೆರಳಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಬೆಂಕಿ ಅನಾಹುತ ಮತ್ತು ಅಲಹಾಬಾದ್ ರೈಲು ನಿಲ್ದಾಣದಲ್ಲಿ ನಡೆದ ಭೀಕರ ಕಾಲ್ತುಳಿತ ಹೊರತುಪಡಿಸಿದರೆ ಕುಂಭಮೇಳ ಸರಾಗವಾಗಿ ನಡೆದುಕೊಂಡು ಹೋಗುತ್ತಿದೆ.
ಭಾರತ ಚಿತ್ರರಂಗದ ಕಾಂಟ್ರವರ್ಸಿ ತಾರೆ ಪೂನಂ ಪಾಂಡೆ (Poonam Pandey) ಮಹಾ ಕುಂಭಮೇಳ( Maha Kumbh Mela) ದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ( amrit snaan) ಮಾಡಿದ್ದಾರೆ. ಬಾಲಿವುಡ್ ನಟಿ ಪೂನಂ ಪಾಂಡೆ ಗಂಗೆಗೆ ಭೇಟಿ ನೀಡಿ ಅಲ್ಲಿ ಸ್ನಾನ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಜ. ರಂದು ಪ್ರಯಾಗ್ ರಾಜ್ ಗೆ ನಟಿ ಪೂನಂ ಪಾಂಡೆ ಭೇಟಿ ನೀಡಿದ್ದು,ಪುಣ್ಯ ಸ್ನಾನ ಮಾಡಿದ್ದಾರೆ. ಸ್ಕೂಟಿ ಮೂಲಕ ಪೂನಂ ಪಾಂಡೆ ಸಂಗಮ್ ಬೀಚ್ ತಲುಪಿದ್ದು, ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ. ಅಲ್ಲದೆ ಕಾಲ್ತುಳಿತ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನು ಇನ್ಸ್ಟಾಗ್ರಾಮ್ ಪೂನಂ ಪುಣ್ಯ ಸ್ನಾನ ಮಾಡಿದ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದು, ಗಂಗಾ, ಯಮುನಾ ಮತ್ತು ಸರಸ್ವತಿ ಈ ಮಹಾ ನದಿಗಳ ಸಂಗಮ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ, ದೇವರಿಗೆ ನಮಸ್ಕರಿಸಿದ್ದಾರೆ.