ಬೆಂಗಳೂರು : ನೀವು ಪಿಯುಸಿ, ಡಿಗ್ರಿ ಸೇರಿ ಮೆಟ್ರಿಕ್ ನಂತರದ ಯಾವುದೇ ಕೋರ್ಸ್ ಗಳಲ್ಲಿ ಪಾಸಾಗಿದ್ದೀರಾ? ಹಾಗದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. 2026–27ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಅರ್ಹ ಪರಿಶಿಷ್ಟ ಜಾತಿ (SC) ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿಯುಸಿ, ಡಿಗ್ರಿ, ಡಿಪ್ಲೋಮಾ ಸೇರಿ ಯಾವುದೇ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಮೊದಲ ಪ್ರಯತ್ನದಲ್ಲಿಯೇ ಪಾಸಾಗಿರುವ ಪರಿಶಿಷ್ಟ ಜಾತಿ ಸಮುದಾಯದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹಾಗಾಗಿ, ವಿದ್ಯಾರ್ಥಿಗಳಿಗೆ ಯಾವುದೇ ಕಚೇರಿಗಳಿಗೆ ಅಲೆಯುವ ತಲೆನೋವು ಕೂಡ ಇಲ್ಲ.
ಮೆಟ್ರಿಕ್ ನಂತರದ ಕೋರ್ಸ್ ನಲ್ಲಿ ಶೇ.60ರಷ್ಟು ಅಂಕಗಳನ್ನು ಪಡೆದಿರಬೇಕು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಸಂಖ್ಯೆಗಳನ್ನು ನೀಡಬೇಕು ಎಂದು ತಿಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ.
ಅಭ್ಯರ್ಥಿಗಳು https://swdservices.karnataka.gov.in/PrizeMoneyClientApp/register ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ಗೊಂದಲ, ಮಾಹಿತಿ ಪಡೆಯಲು 94823 00400 ಹಾಗೂ 080-22634300 ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು. ಪರಿಶಿಷ್ಟ ಜಾತಿಯವರು ಉನ್ನತ ಶಿಕ್ಷಣ ಪಡೆಯಲು ನೆರವಾಗಲಿ ಎಂದು ಪ್ರತಿ ವರ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಇದನ್ನೂ ಓದಿ : ಕೇಂದ್ರದ PMVBRY ಯೋಜನೆಯ 15 ಸಾವಿರ ರೂ. ಪಡೆಯಲು ಫೇಸ್ ಅಥೆಂಟಿಕೇಶನ್ ಕಡ್ಡಾಯ : ಹೀಗೆ ಮಾಡಿ



















