ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) 2023-24ನೇ ಸಾಲಿನ ಗೆಜೆಟ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ (Group A & B ) ಪರೀಕ್ಷೆ ಮುಂದೂಡಿದೆ.
384 ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿದೆ. ಮಾರ್ಚ್ 28, 29 ಮತ್ತು ಏಪ್ರಿಲ್ 1, 2ರಂದು ನಡೆಸುವುದಾಗಿ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯಲ್ಲಿ ತಿಳಿಸಿತ್ತು. ಇದೀಗ ಕಾರಣಾಂತರಗಳಿಂದ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಿರುವುದಾಗಿ ಆದೇಶ ಹೊರಡಿಸಲಾಗಿದೆ.
ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಫೆಬ್ರವರಿ 13ರ ಅಧಿಸೂಚನೆ ಪ್ರಕಾರ ಮಾರ್ಚ್ 28, 29 ಮತ್ತು ಏಪ್ರಿಲ್ 1, 2ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ, ಹಲವು ಕಾರಣಗಳಿಂದಾಗಿ ಪರೀಕ್ಷೆ ಮುಂದೂಡಲಾಗಿದೆ. ಆಯೋಗದ ಅಧಿಕೃತ ವೆಚ್ ಸೈಟ್ನಲ್ಲಿ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.