ಬೆಂಗಳೂರು: ರಸ್ತೆಯಲ್ಲಿದ್ದ ಗುಂಡಿ ಗಮನಿಸದೆ ಬಿದ್ದ ಸವಾರ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಸಿಲ್ಕ್ ಬೋರ್ಡ್ ಫ್ಲೈಓವರ್ ಬಳಿ ಈ ಘಟನೆ ನಡೆದಿದೆ. ರಸ್ತೆಯಲ್ಲಿನ ಗುಂಡಿಗೆ ಬಿದ್ದು, ರಸ್ತೆಗೆ ಎಗರಿ ಬೈಕ್ ಸವಾರ ಬಿದ್ದಿದ್ದಾರೆ. ಹಿಂಬದಿ ವಾಹನ ಸವಾರರ ಸಮಯ ಪ್ರಜ್ಞೆಯಿಂದಾಗಿ ಅಪಾಯ ತಪ್ಪಿದೆ. ಹಿಂಬದಿ ಕಾರಿನ ಡ್ಯಾಶ್ ಕ್ಯಾಮರಾದಲ್ಲಿ ಈ ವಿಡಿಯೋ ಸೆರೆಯಾಗಿದೆ. ಮಡಿವಾಳ ಟು ರೂಪೇನಾ ಅಗ್ರಹಾರ ಮಾರ್ಗದಲ್ಲಿ ಈ ಘಟನೆ ನಡೆದಿದೆ. ರಸ್ತೆ ಮಾಡದ ಹಿನ್ನೆಲೆಯಲ್ಲಿ ಸ್ಥಳೀಯರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.



















