ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವೈದ್ಯಕೀಯ ತಪಾಸಣೆ ಮುಕ್ತಾಯವಾಗಿದ್ದು, ಫಿಟ್ ಆಂಡ್ ಫೈನ್ ಆಗಿದ್ದಾರೆ ಎನ್ನಲಾಗಿದೆ.
ಕಳೆದ 34 ದಿನಗಳ ನಂತರ ಬೆಂಗಳೂರಿಗೆ ಆಗಮಿಸಿರುವ ಪ್ರಜ್ವಲ್ ರೇವಣ್ಣರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್‌ಗೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದರು. ತಪಾಸಣೆಯಲ್ಲಿ ಪ್ರಜ್ವಲ್ ಫಿಟ್ & ಫೈನ್ ಆಗಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.
ಜನರಲ್ ಚೆಕಪ್ ಮಾಡಿರುವ ಬೌರಿಂಗ್ ಆಸ್ಪತ್ರೆಯ (Bowring Hospital) ವೈದ್ಯರು, ಬಿಪಿ, ಶುಗರ್, ಹಾರ್ಟ್ ಬೀಟ್, ಪಲ್ಸ್ ರೇಟ್, ಬಾಡಿ ಟೆಂಪರೇಚರ್, ಆಕ್ಸಿಜನ್ ಲೆವಲ್ ಪರಿಶೀಲನೆ ನಡೆಸಿದ್ದಾರೆ. ಆದರೆ, ಎಲ್ಲವೂ ನಾರ್ಮಲ್ ಆಗಿದೆ ಎಂದು ರಿಪೋರ್ಟ್ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಅಶ್ಲೀಲ ವೀಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣವು ದೇಶಾದ್ಯಂತ ಭಾರೀ ಕೋಲಹಲ ಎಬ್ಬಿಸಿತ್ತು. ಈ ನಡುವೆ ಪ್ರಕರಣ ಹೊರ ಬರುತ್ತಿದ್ದಂತೆ ಪ್ರಜ್ವಲ್ ಜರ್ಮನಿಗೆ (Germany) ಹಾರಿದ್ದರು. ಇದಾದ ಬಳಿಕ ಎಸ್‌ಐಟಿ ನೋಟಿಸ್. ಲುಕೌಟ್ ನೋಟಿಸ್ ಜಾರಿ ಮಾಡಿದ್ದರೂ ಪ್ರಜ್ವಲ್ ರೇವಣ್ಣ ಬಂದಿರಲಿಲ್ಲ. ಸೋಮವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಎಸ್‌ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದರು. ಅದರಂತೆ ನಿನ್ನೆ ರಾತ್ರಿ ಎಸ್ ಐಟಿ ಎದುರು ಶರಣಾಗಿದ್ದಾರೆ.