ಬೆಂಗಳೂರು: ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 7 ಲಕ್ಷ ರೂ. ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ವಾದ ಪ್ರತಿವಾದ ಮಂಡಿಸಿದರು. ನ್ಯಾ. ಗಜಾನನ ಭಟ್ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.



















