ಬೆಂಗಳೂರು: ಮಾಜಿ ಸಂಸದ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಕೋರ್ಟ್ ನಲ್ಲಿ ಕಣ್ಣೀರು ಸುರಿಸಿದ್ದಾರೆ.
ಪ್ರಜ್ವಲ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಶಾಕ್ ನೀಡಿದ್ದು, ಅತ್ಯಾಚಾರ ಪ್ರಕರಣದದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ (Court) ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಕೋರ್ಟ್ ನಲ್ಲೇ ಕಣ್ಣೀರು ಸುರಿಸಿದ್ದಾರೆ. ಕೆ.ಆರ್ ನಗರ (KR Nagara) ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Representatives Speical Court) ವಜಾಗೊಳಿಸಿದೆ. ಈ ಸಂದರ್ಭದಲ್ಲಿ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದರು. ಆಗ ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಕಣ್ಣೀರು ಹಾಕಿದರು.