ಅತ್ಯಾಚಾರ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನ ಎಸ್‌ಐಟಿ ಅಧಿಕಾರಿಗಳು ಇಂದು ಹಾಸನಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ.
ಸ್ಥಳ ಮಹಜರು ಪ್ರಕ್ರಿಯೆಯ ಹಿನ್ನೆಲೆಯಲ್ಲಿ, ಹಾಸನದ ಹೊಳೆನರಸೀಪುರದ ಸಂಸದರ ಕಚೇರಿಗೆ ಪ್ರಜ್ವಲ್ ರೇವಣ್ಣರನ್ನ ಕರೆದ್ಯೊಯ್ಯಲಿದ್ದು, ಅಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಇನ್ನು ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರ ಚಲನವಲನದ ಬಗ್ಗೆ ವಹಿಸಿದ್ದು, ಈಗಾಗಲೇ ಹಲವು ಮಾಹಿತಿಯನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.