ಬೆಂಗಳೂರು : ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ಮಾಸ್ಕ್ಮ್ಯಾನ್ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.ಇದೀಗ ಈ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿದ್ದು, ಚಿನ್ನಯ್ಯನ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ. ಕೋರ್ಟ್ ಎಸ್‌ಐಟಿ ಚೀಫ್‌ಗೆ ಕೇಳಿದೆ, ಅವರು ಉತ್ತರ ಕೊಡಲಿ. ಮಾಧ್ಯಮಗಳಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.
ಮಾಧ್ಯಮಗಳಲ್ಲಿ ಮತ್ತು ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಮಾಹಿತಿ ಪ್ರಕಾರ 200 ಕೋಟಿ ರೂಪಾಯಿಗಳ ಆರೋಪದ ಕುರಿತು ಪ್ರಸ್ತಾಪವಾಗಿದೆ. ಇದು ಸಣ್ಣ ಮೊತ್ತವಲ್ಲ. ಆದರೆ ಅದು ಎಷ್ಟು ನಿಜವೋ ಎಷ್ಟು ಸುಳ್ಳೋ ಗೊತ್ತಿಲ್ಲ” ಎಂದು ಖರ್ಗೆ ಹೇಳಿದ್ದಾರೆ.
ಅದೇ ವ್ಯಕ್ತಿ (ಚಿನ್ನಯ್ಯ) ಹಿಂದಿನ ಮತ್ತು ಈಗಿನ ಈ ಎಲ್ಲ ಹೇಳಿಕೆಗಳನ್ನು ನೀಡಿರುವುದರಿಂದ, ಅವುಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದನ್ನು ಪರಿಶೀಲಿಸುವುದು ಮುಖ್ಯ. ಯಾವುದೇ ಹೆಸರು ಪ್ರಸ್ತಾಪವಾದ ತಕ್ಷಣವೇ ಎಲ್ಲರೂ ಕ್ರಿಮಿನಲ್‌ಗಳಲ್ಲ. ಎಸ್ಐಟಿ ಮುಖ್ಯಸ್ಥರು ಮೊದಲು ನ್ಯಾಯಾಲಯಕ್ಕೆ ಉತ್ತರ ನೀಡಬೇಕು. ಆ ಬಗ್ಗೆ ಮಾಧ್ಯಮದಲ್ಲಿ ಚರ್ಚಿಸುವುದು ಸರಿಯಲ್ಲ ಎಂದು ಗೃಹಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ : ತಮಿಳುನಾಡು ರಾಜಕೀಯಕ್ಕೆ ನಟ ರಾಘವ ಲಾರೆನ್ಸ್ ದಿಢೀರ್ ಎಂಟ್ರಿ : ಸಿಎಂ ವಿಜಯ್‌ರಿಂದ ತೆರವಾದ ಕ್ಷೇತ್ರದಲ್ಲಿ ಕಣಕ್ಕೆ?



















