ಬೆಂಗಳೂರು: ಭಕ್ತರು ಬಯಸಿದ ದೇವಾಲಯದಿಂದ ಮನೆ ಬಾಗಿಲಿಗೆ ಪ್ರಸಾದ ತಲುಪಿಸುವ ಯೋಜನೆಗೆ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿನ ಪ್ರತಿ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಮುಂದಾಗಿದೆ.
ಮುಜರಾಯಿ ಇಲಾಖೆ ಹೊಸ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ಜನರಿಗೆ ಸೇವೆ ನೀಡಲು ಚಿಂತನೆ ನಡೆಸಿದೆ. ಆನ್ ಲೈನ್ ಸೇವೆ, ಬುಕ್ಕಿಂಗ್ ಎಂಬುವುದು ಈಗಾಗಲೇ ಜಾರಿಯಲ್ಲಿದೆ. ಇದರೊಂದಿಗೆ ಮತ್ತೊಂದು ಹೊಸ ಯೋಜನೆ ಜಾರಿಗೆ ಇಲಾಖೆ ಮುಂದಾಗಿದೆ. ಹೀಗಾಗಿ ಭಕ್ತರು ತಮಗೆ ಬೇಕಾದ ದೇವಸ್ಥಾನದ ಪ್ರಸಾದವನ್ನು ಮನೆಯಿಂದಲೇ ಕುಳಿತು ಸ್ವೀಕರಿಸಬಹುದು. ರಾಜ್ಯ ವ್ಯಾಪಿ ಇರುವ ಯಾವುದೇ ದೇವಸ್ಥಾನ ಪ್ರಸಾದವನ್ನು ಆನ್ ಲೈನ್ಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಪ್ರಸಾದ ತಂದು ಕೊಡುವ ಯೋಜನೆ ಶೀಘ್ರವೇ ಜಾರಿಗೆ ತರಲು ಚಿಂತನೆ ನಡೆದಿದೆ.
ಈ ಯೋಜನೆ ಜಾರಿಗಾಗಿ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಜೊತೆ ಮಾತುಕತೆ ಕೂಡ ನಡೆಯುತ್ತಿದೆ. ಈಗಾಗಲೇ ಮುಜರಾಯಿ ಇಲಾಖೆಯಲ್ಲಿ ತಯಾರಿಸುವ ಪ್ರಸಾದಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ಈಗ ಪ್ರಸಾದ ತಲುಪಿಸುವ ಯೋಜನೆ ಕುರಿತು ಚರ್ಚೆ ನಡೆಯುತ್ತಿದೆ. ಈ ಯೋಜನೆ ಜಾರಿಯಾಗಲಿ ಎಂದು ಭಕ್ತರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.