ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಾಗಿ ಕಾರ್ಯನಿರ್ವಹಿಸುವ ಪ್ರಸಾರ ಭಾರತಿ (Prasar Bharati Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 29 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಕಾಪಿ ಎಡಿಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪ್ರಸಾರ ಭಾರತಿ
ಒಟ್ಟು ಹುದ್ದೆಗಳು: 29
ಹುದ್ದೆಗಳ ಹೆಸರು: ಕಾಪಿ ಎಡಿಟರ್
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ವಿದ್ಯಾರ್ಹತೆ ಏನು?
ಪಿಯುಸಿ, ಯಾವುದೇ ವಿಷಯದಲ್ಲಿ ಪದವಿ, ಡಿಪ್ಲೋಮಾ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಹೈದರಾಬಾದ್, ಮುಂಬೈ, ಜಮ್ಮು, ಬೆಂಗಳೂರು ಮತ್ತು ಕೋಲ್ಕತ್ತಾ, ಲೇಹ್, ಜಮ್ಮು ಸೇರಿ ಹಲವು ನಗರಗಳಲ್ಲಿರುವ ಪ್ರಸಾರ ಭಾರತಿ ಕಚೇರಿಗಳಲ್ಲಿ ಕೆಲಸ ಮಾಡಲು ಬಯಸುವವರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನ ಪ್ರಸಾರ ಭಾರತಿ ಕಚೇರಿಯಲ್ಲಿ ಎರಡು ಹುದ್ದೆಗಳು ಖಾಲಿ ಇವೆ.
ಕಾಪಿ ಎಡಿಟರ್ ಹುದ್ದೆಗಳಿಗೆ ಕನಿಷ್ಠ ಎರಡು ರಿಂದ ಮೂರು ವರ್ಷದ ಮಾಧ್ಯಮ ಕ್ಷೇತ್ರದ ಅನುಭವದ ಅಗತ್ಯವಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು prasarbharati.gov.in ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಆಯುಷ್ಮಾನ್ ಭಾರತ್ ಅನ್ವಯ 5 ಲಕ್ಷ ಅಲ್ಲ, 10 ಲಕ್ಷ ರೂ.ವರೆಗೆ ಉಚಿತ ಕವರೇಜ್ : ಹೇಗೆ ಅಂತೀರಾ?



















