ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Actor Vijay: ವಿಜಯ್‌ಗೆ ಪ್ರಶಾಂತ್ ಕಿಶೋರ್ ಸಾಥ್: 2026ರ ತಮಿಳುನಾಡು ಚುನಾವಣಾ ಸಮರಕ್ಕೆ ವೇದಿಕೆ ಸಿದ್ಧ!

February 26, 2025
Share on WhatsappShare on FacebookShare on Twitter

ಚೆನ್ನೈ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯು ಆಡಳಿತಾರೂಢ ಡಿಎಂಕೆ ಮತ್ತು ನಟ ವಿಜಯ್ ಅವರ ಟಿವಿಕೆ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಲಿದೆಯೇ ಎಂಬ ಅನುಮಾನ ಮೂಡಿದೆ. ಹೊಸ ಪಕ್ಷ ಸ್ಥಾಪಿಸಿ ಒಂದು ವರ್ಷವಾಗುತ್ತಲೇ ವಿಜಯ್ ಅವರ ರಾಜಕೀಯ ನಾಗಾಲೋಟವು ಮತ್ತಷ್ಟು ತೀವ್ರತೆ ಪಡೆದಿದ್ದು, ರಾಜ್ಯದಲ್ಲಿ ದ್ರಾವಿಡ ದೈತ್ಯ ಪಕ್ಷಗಳನ್ನು ಎದುರು ಹಾಕಿಕೊಳ್ಳಲು ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ.

ನಟ- ರಾಜಕಾರಣಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ತಮ್ಮ ಪಕ್ಷದ ಮೊದಲ ವಾರ್ಷಿಕೋತ್ಸವವನ್ನು ಮಹಾಬಲಿಪುರಂನಲ್ಲಿ ಭಾರೀ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡಿದ್ದಾರೆ. ಈ ಮೂಲಕ ಅವರು ತಮಿಳುನಾಡಿನ 2026ರ ಚುನಾವಣೆಗೆ ವೇದಿಕೆ ಸಿದ್ಧಗೊಳಿಸುತ್ತಿರುವ ಸಂದೇಶವನ್ನು ಆಡಳಿತ ಪಕ್ಷಕ್ಕೆ ರವಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಗಮನ ಸೆಳೆದ ಮತ್ತೊಂದು ಅಂಶವೆಂದರೆ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಉಪಸ್ಥಿತಿ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣಾ ರಣತಂತ್ರ ರೂಪಿಸಿಕೊಟ್ಟು, ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್ ಅವರು ವಿಜಯ್ ಜತೆ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಟಿವಿಕೆಯ ಚುನಾವಣಾ ರಣತಂತ್ರಕ್ಕೆ ಕೈಜೋಡಿಸುವ ಮುನ್ಸೂಚನೆ ಕೊಟ್ಟಿದ್ದಾರೆ.

ಟಿವಿಕೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಾಂತ್ ಕಿಶೋರ್ ಉಪಸ್ಥಿತಿಯು ಪಕ್ಷದ ಚುನಾವಣಾ ಕಾರ್ಯತಂತ್ರದ ಚರ್ಚೆಗೆ ಇನ್ನಷ್ಟು ಇಂಬು ನೀಡಿದೆ. ಭಾರತದಾದ್ಯಂತ ಹಲವಾರು ಪಕ್ಷಗಳ ಗೆಲುವಿನ ಅಭಿಯಾನಗಳನ್ನು ರೂಪಿಸಿರುವ ಕಿಶೋರ್, ಟಿವಿಕೆಗೂ ಮಾರ್ಗದರ್ಶನ ನೀಡುತ್ತಿದ್ದಾರೆ ಎಂಬ ಗುಸುಗುಸು ಆರಂಭವಾಗಿದೆ.

ಕೇಂದ್ರದಲ್ಲಿ ಬಿಜೆಪಿ ಮತ್ತು ತಮಿಳುನಾಡಿನಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ #GetOutModi ಮತ್ತು #GetOutStalin ಅಭಿಯಾನಕ್ಕೂ ವಿಜಯ್ ಇದೇ ವೇಳೆ ಚಾಲನೆಯನ್ನೂ ನೀಡಿದ್ದಾರೆ. ಎರಡೂ ಸರ್ಕಾರಗಳು ಜನರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿವೆ ಎಂದು ವಿಜಯ್ ಕಿಡಿ ಕಾರಿದ್ದಾರೆ.

ವಿಜಯ್ ಅವರ ರಾಜಕೀಯ ಪ್ರವೇಶವನ್ನು ತಮಿಳು ಚಿತ್ರರಂಗದ ದಂತಕಥೆಗಳಾದ ಎಂಜಿ ರಾಮಚಂದ್ರನ್ (ಎಂಜಿಆರ್) ಮತ್ತು ಜೆ ಜಯಲಲಿತಾ ಅವರ ರಾಜಕೀಯ ಯಶಸ್ಸುಗಳಿಗೆ ಹೋಲಿಸಲಾಗುತ್ತಿದೆ. ಆದಾಗ್ಯೂ ವಿಜಯ್ ರಾಜಕೀಯ ಭವಿಷ್ಯ ಏನಾಗುತ್ತದೆಂದು ಊಹಿಸುವುದು ಕಷ್ಟಸಾಧ್ಯ. ಏಕೆಂದರೆ ಶಿವಾಜಿ ಗಣೇಶನ್, ವಿಜಯಕಾಂತ್ ಮತ್ತು ಕಮಲ್ ಹಾಸನ್‌ರಂತಹ ದಿಗ್ಗಜರು ತಮ್ಮ ಸ್ಟಾರ್ ಗಿರಿಯನ್ನು ರಾಜಕೀಯ ಯಶಸ್ಸಾಗಿ ಪರಿವರ್ತಿಸಲು ವಿಫಲಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ತಮಿಳುನಾಡು ಆಡಳಿತ ಪಕ್ಷವಾದ ಡಿಎಂಕೆಯ ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ವಂಶಪಾರಂಪರ್ಯ ರಾಜಕೀಯದ ಬಗ್ಗೆ ವಿಜಯ್ ಕಟು ಪದಗಳ ಟೀಕೆಗಳನ್ನು ಮುಂದುವರಿಸಿದ್ದಾರೆ. ಜತೆಗೆ ಬಿಜೆಪಿಯ “ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾಪದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿ ವಾಗ್ದಾಳಿ ನಡೆಸಿದ್ದಾರೆ. ಆದರೆ, ಎಐಎಡಿಎಂಕೆ ಬಗ್ಗೆ ಅವರು ಮೌನ ವಹಿಸಿರುವುದು, ಸಂಭಾವ್ಯ ಮೈತ್ರಿಯ ಸುಳಿವನ್ನೂ ನೀಡಿದೆ ಎನ್ನಲಾಗಿದೆ.

ಟಿವಿಕೆ ಇನ್ನೂ ಯಾವುದೇ ಪ್ರಮುಖ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿಲ್ಲವಾದರೂ, ವಿಜಯ್- ಎಐಎಡಿಎಂಕೆ ಮೈತ್ರಿ ಮಾಡಿಕೊಂಡರೆ ಆಡಳಿತ ಪಕ್ಷಕ್ಕೆ ಗಂಭೀರ ಸವಾಲು ಎದುರಾಗಲಿದೆ. ಜಯಲಲಿತಾ ಅವರ ನಿಧನದ ನಂತರ ಒಳಜಗಳ ಮತ್ತು ನಾಯಕತ್ವದ ವಿವಾದಗಳಿಂದ ದುರ್ಬಲಗೊಂಡಿರುವ ಎಐಎಡಿಎಂಕೆ, ಚುನಾವಣೆಗೆ ಮುಂಚಿತವಾಗಿ ಬಲಗೊಳ್ಳಲು ನೋಡುತ್ತಿದೆ. ಅದಕ್ಕೆ ವಿಜಯ್ ನೆರವು ನೀಡುವರೇ ಎಂಬುದೇ ಸದ್ಯದ ರಾಜಕೀಯ ಕುತೂಹಲ.

Tags: Actor VijayAssemblyAssembly Bypoll resultsPrashant KishoreSaath for Vijay
SendShareTweet
Previous Post

ಅಮೆರಿಕದ ಪೌರತ್ವ ಮಾರಾಟಕ್ಕಿದೆ, 43 ಕೋಟಿ ರೂ. ಪಾವತಿಸಿ ಪೌರತ್ವ ಪಡೆಯಿರಿ!: ಟ್ರಂಪ್ ಹೊಸ ಆಫರ್

Next Post

shah rukh khan: ಸ್ವಂತ ಮನ್ನತ್‌’ ಬಿಟ್ಟು ಬೇರೆಡೆಗೆ ಶಾರುಖ್​ ಕುಟುಂಬ ಸ್ಥಳಾಂತರ: ಕಾರಣವೇನು?

Related Posts

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ
ದೇಶ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ : ಎರಡೂ ಪ್ರಮುಖ ಪಕ್ಷಗಳ ‘ಜೆನ್ ಝೀ’ ಅಭ್ಯರ್ಥಿಗಳಿಗೆ ಐತಿಹಾಸಿಕ ಜಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ
ದೇಶ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!
ದೇಶ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Next Post
shah rukh khan: ಸ್ವಂತ ಮನ್ನತ್‌’ ಬಿಟ್ಟು ಬೇರೆಡೆಗೆ ಶಾರುಖ್​ ಕುಟುಂಬ ಸ್ಥಳಾಂತರ: ಕಾರಣವೇನು?

shah rukh khan: ಸ್ವಂತ ಮನ್ನತ್‌’ ಬಿಟ್ಟು ಬೇರೆಡೆಗೆ ಶಾರುಖ್​ ಕುಟುಂಬ ಸ್ಥಳಾಂತರ: ಕಾರಣವೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat