ಬೆಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಎನ್ ಐಎ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಆರೋಪಿಗಳ ಹೆಡೆಮೂರಿ ಕಟ್ಟಿದ್ದಾರೆ.
ಇಂದು ಎನ್ ಐಎ ಅಧಿಕಾರಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಯಾದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳು ಕತಾರ್‌ನಿಂದ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದಿದ್ದಾರೆ. ಹಲವು ತಿಂಗಳುಗಳಿಂದ ಆರೋಪಿಗಳು ತಲೆಮರೆಸಿಕೊಂಡು ಓಡಾಡುತ್ತಿದ್ದರು. ಕತಾರ್‌ನಿಂದ ಭಾರತಕ್ಕೆ ಬಂದಿಳಿದ ತಕ್ಷಣ ಬಂಧಿಸಿದ್ದಾರೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತನಿಖೆ ಮತ್ತೆ ಚುರುಕುಗೊಂಡಿದೆ.