ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇತ್ತೀಚೆಗಷ್ಟೇ ಬಜೆಟ್ ಮಂಡಿಸಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರದ ಬಜೆಟ್ ಸಿದ್ಧವಾಗುತ್ತಿದೆ. ಹೀಗಾಗಿ ಎಲ್ಲ ಇಲಾಖೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸರಣಿ ಸಭೆ ನಡೆಸಲು ಮುಂದಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡ್ಮೂರು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದು, ವಿಶ್ರಾಂತಿಯಲ್ಲಿದ್ದರು. ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ನಂತರ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದರು. ವಿಶ್ರಾಂತಿಯ ನಂತರ ಸರಣಿ ಸಭೆ ನಡೆಸಲು ಸಿಎಂ ಮುಂದಾಗಿದ್ದಾರೆ.
ನಾಳೆಯಿಂದ ಬಜೆಟ್ ಪೂರ್ವ ತಯಾರಿ ಸಭೆ ನಡೆಸಲು ಸಿಎಂ ಮುಂದಾಗಿದ್ದಾರೆ. ಗುರುವಾರದಿಂದ ಐದು ದಿನಗಳ ಕಾಲ ನಿರಂತರವಾಗಿ ಬಜೆಟ್ ಪೂರ್ವ ತಯಾರಿ ಸಭೆ ನಡೆಸಲಿದ್ದಾರೆ. ಈ ವೇಳೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಇಲಾಖೆವಾರು ಸಮಯ ನಿಗದಿ ಮಾಡಿ ಸಿಎಂ ಸಭೆ ನಡೆಸಿ, ಬಜೆಟ್ ಸಿದ್ಧಪಡಿಸಲಿದ್ದಾರೆ.