ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆ ಧರೆಯನ್ನು ಮಾತ್ರ ತಂಪು ಮಾಡದೆ, ಹಲವು ಅವಾಂತರಗಳನ್ನು ಸೃಷ್ಟಿ ಮಾಡುತ್ತಿದೆ. ಇಂದು ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ 2 ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಸಿಡಿಲಿಗೆ ಬಲಿಯಾಗಿದ್ದಾರೆ. ಕೊಪ್ಪಳದ ಚುಕ್ಕನಕಲ್ನಲ್ಲಿ ಸಿಡಿಲು ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲ ಕೊಪ್ಪಳ ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಯಾಗಿವೆ. ಭತ್ತದ ಬೆಳೆ ನೆಲಕಚ್ಚಿದೆ. ಪಪ್ಪಾಯಿ, ನುಗ್ಗೆಕಾಯಿ ಗಿಡಗಳು ನೆಲಕ್ಕೆ ಉರುಳಿ ಅನ್ನದಾತ ಕಂಗಾಲಾಗುವಂತಾಗಿದೆ.
ಧಾರವಾಡ, ಕೋಲಾರ, ಚಿತ್ರದುರ್ಗ, ಮಂಗಳೂರು ಸೇರಿದಂತೆ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ.