ಬೆಂಗಳೂರು : ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಏಪ್ರಿಲ್ 14, ಮಂಗಳವಾರದಂದು ಬೆಂಗಳೂರಿನಲ್ಲಿ ವಿಶೇಷವಾಗಿ ಆಚರಿಸಲು ಸಿದ್ಧತೆ ನಡೆಯುತ್ತಿದೆ.
ಮಹಾನಾಯಕ ಡಾ. ಬಿ.ಆರ್ ಅಂಬೇಡ್ಕರ್ ಸೇನೆ(ರಿ.) ವತಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಬೆಂಗಳೂರಿನ ಸಂಜಯನಗರದ ನಾಗಶೆಟ್ಟಿಹಳ್ಳಿಯಲ್ಲಿ ಆಯೋಜಿಸಲಾಗಿದೆ. ಅಂಬೇಡ್ಕರ್ ಅವರ ಆದರ್ಶಗಳನ್ನು ಜನರಿಗೆ ಪರಿಚಯಿಸುವುದು, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಂವಿಧಾನದ ಮಹತ್ವವನ್ನು ಸಾರಿದ ಡಾ. ಅಂಬೇಡ್ಕರ್ ಅವರ ಚಿಂತನೆಗಳನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿರಲಿದೆ.

ನಾಗಶೆಟ್ಟಿಹಳ್ಳಿಯಲ್ಲಿ ನಡೆಯಲಿರುವ ಈ ‘ಅಂಬೇಡ್ಕರ್ ಜಯಂತೋತ್ಸವ’ ಕಾರ್ಯಕ್ರಮದಲ್ಲಿ ಅನೇಕ ಸಮಾಜಮುಖಿ ನಾಯಕರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಜೀವನ ಸಾಧನೆಗಳು ಹಾಗೂ ಅವರು ಸಮಾಜಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಿ ಅತಿಥಿಗಳು ಮಾತನಾಡಲಿದ್ದಾರೆ. ಅಂಬೇಡ್ಕರ್ ಅವರ ಸಮಾನತೆ, ಶಿಕ್ಷಣ ಮತ್ತು ಸ್ವಾಭಿಮಾನ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಜಯಂತಿ ಆಚರಣೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಮೈಸೂರು ವಿವಿಯ ಆಡಳಿತ ವೈಖರಿಯ ಬಗ್ಗೆ ಬೇಸರ ಹೊರಹಾಕಿದ ವಿದ್ಯಾರ್ಥಿ



















