ಮೈಸೂರು: ರಾಷ್ಟ್ರಪತಿ ದೌಪದಿ ಮುರ್ಮು ಎರಡು ದಿನಗಳ ಮೈಸೂರು ಪ್ರವಾಸದ ಬಳಿಕ ಇಂದು (ಮಂಗಳವಾರ) ಬೆಳಿಗ್ಗೆ ಇಲ್ಲಿಂದ ನಿರ್ಗಮಿಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಳ್ಕೊಟ್ಟರು.
ಇದಕ್ಕೂ ಮುನ್ನ ರಾಷ್ಟ್ರಪತಿ ಹಾಗೂ ಅವರ ಕುಟುಂಬದವರು ಮೈಸೂರು ಅರಮನೆಗೆ ಭೇಟಿ ನೀಡಿ, ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಕುಟುಂಬದಿಂದ ಆತಿಥ್ಯ ಸ್ವೀಕರಿಸಿದರು.