ಬೆಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆದಿದೆ.
ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಕೂಡ ಭಾಗವಹಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಪ್ರತಿಭಟನೆ ನಡೆದಿದೆ. ಸಿಲಿಂಡರ್ ಮುಂದಿಟ್ಟು ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ಒಲೆ ಹೂಡಿ ಸೌದೆಯಲ್ಲಿ ಟೀ, ಕಾಫಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು. ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.