ರಾಮನಗರ: ಕೊಂಡ ಹಾಯುವಾಗ ಅರ್ಚಕರೊಬ್ಬರು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೂತಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ನಡೆದ ಬಾಣಂತ ಮಾರಮ್ಮಯ ತಾಯಿಯ ಕೊಂಡಮಹೋತ್ಸವದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಶಿವಣ್ಣ(42), ರಾಮಸ್ವಾಮಿ (63) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇಬ್ಬರು ಕೈ, ಕಾಲುಗಳಿಗೆ ಗಾಯಗಳಾಗಿವೆ.